ಗೋಲ್ಡನ್ ಟೆಂಪಲ್ ನಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಡಿ. 04 ಅಮೃತಸರ: ಇಂದು ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲೇ ಇದ್ದ ಜನರಿಂದ ಶೂಟರ್ ಮೇಲೆ ಹಲ್ಲೆ ನಡೆದಿದೆ.

ದಾಳಿಕೋರನನ್ನು ಬಂಧಿಸಲಾಗಿದ್ದು, ಆಘಾತಕಾರಿ ದಾಳಿಯ ಹಿಂದಿನ ಉದ್ದೇಶವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಜಿ ಎಸ್‌ಎಡಿ ಸಂಸದ ನರೇಶ್ ಗುಜ್ರಾಲ್, ಈ ದಾಳಿಯು ಪಂಜಾಬ್‌ನಲ್ಲಿ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ತೋರಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

Also Read  ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ➤ ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ

error: Content is protected !!
Scroll to Top