(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 04. ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಈ ವಾರವೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಒಳನಾಡಿನ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.