ಬೆಳ್ತಂಗಡಿ: ನೇತ್ರಾವದಿ ನದಿಯಲ್ಲಿ ಮುಳುಗಿ ಆರ್ಎಸ್ಎಸ್ ಕಾರ್ಯಕರ್ತ ಸಾವು

(ನ್ಯೂಸ್ ಕಡಬ) newskadaba.com ಡಿ. 04 ಬೆಳ್ತಂಗಡಿ: ನೇತ್ರಾವದಿ ನದಿಯಲ್ಲಿ ಈಜಾಡಲು ತೆರಳಿ ನೀರುಪಾಲಾಗಿದ್ದ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದರು.

ಸೋಮವಾರ ನೇತ್ರಾವತಿ ಈಜಾಡಲು ಸಂಜೆ ನದಿಯಲ್ಲಿ ಮೂವರು ಇಳಿದಿದ್ದರು. ಈ ವೇಳೆ ಪ್ರಸಾದ್ ನೀರಿನ ಸೆಳೆತಕ್ಕೆಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ತಡರಾತ್ರಿ ಶವವನ್ನು ಮೇಲೆತ್ತಲಾಗಿದೆ. ಉಳಿದ ಇಬ್ಬರನ್ನು ರಕ್ಷಿಸಲಾಗಿತ್ತು.

Also Read  ಕಡಬ: ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಮಳೆ ➤ ಮಳೆಯಿಂದಾಗಿ ತಂಪಾದ ಇಳೆ

error: Content is protected !!
Scroll to Top