(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮವನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ದೇಶದ ವಿವಿಧ ಭಾಷೆಗಳ ಬಗ್ಗೆ ಅರಿವು ಹಾಗೂ ಮೆಚ್ಚುಗೆ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ʼಭಾರತೀಯ ಭಾಷಾ ಉತ್ಸವ’ವನ್ನು ಸ್ವಾತಂತ್ರ್ಯ ಹೋರಾಟಗಾರ, ಮಹಾಕವಿ ಸುಬ್ರಮಣ್ಯ ಭಾರತೀ ಅವರ ಜನ್ಮದಿನಾಚರಣೆಯ ಅಂಗವಾಗಿ ಡಿಸೆಂಬರ್ 4ರಿಂದ 11ರವರೆಗೆ ಆಚರಿಸಲಾಗುತ್ತದೆ. ಶಾಲಾ ಹಂತದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ‘ಭಾಷೆಗಳ ಮೂಲಕ ಏಕತೆ ‘ ಎಂಬ ಥೀಮ್‌ನೊಂದಿಗೆ ಶಾಲಾ ಮಕ್ಕಳಲ್ಲಿ ಭಾಷಾಭಿಮಾನ ಬೆಳೆಸಿ, ನಾವೆಲ್ಲ ಒಂದೇ ಎಂಬ ಭಾವನೆಯನ್ನು ಬೆಳೆಸಲು ವಿವಿಧ ಭಾಷಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.