ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ದೇಶದಲ್ಲಿಯೇ ಮೊದಲ ಆರೋಗ್ಯ ನಗರವನ್ನಾಗಿ ಬೆಂಗಳೂರನ್ನು ಪರಿವರ್ತಿಸುವ ಆರೋಗ್ಯ ಸಿಟಿ ದೃಷ್ಠಿಕೋನವನ್ನು ಬೆಂಬಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು.

ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಆರೋಗ್ಯ ವಲ್ಡ್, ರೋಟರಿ ಮತತು ಬಿ-ಪ್ಯಾಕ್ ಸಹಯೋಗದಲ್ಲಿ ನಡೆದ ಆರೋಗ್ಯ ಸಿಟಿ ಸಮ್ಮಿಟ್-2024 ಉದ್ಘಾಟಿಸಿ ಸಚಿವರು ಮಾತನಾಡಿದರು. ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಆದರೆ, ಇಂದು ಒಬೆಸಿಟಿ, ಡಯಾಬಿಟಿಸ್, ಬಿಪಿ, ಒತ್ತಡ ಹೀಗೆ ಅನೇಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಎಷ್ಟೇ ಕೆಲಸವಿದ್ದರೂ, ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ದಿನದಲ್ಲಿ ಒಂದಿಷ್ಟು ಕಾಲ ತೆಗೆದಿಡುವ ಅವಶ್ಯಕತೆ ಇದೆ. ನಮ್ಮ ನಗರವನ್ನು ಆರೋಗ್ಯ ಸಿಟಿಯನ್ನಾಗಿ ಮಾಡುವ ನಿಟ್ಟಿನಲ್ಲಿ ನಡೆಯುತ್ತಿರುವ ಈ ಪ್ರತಿಜ್ಞೆಯ ಆಂದೋಲನ ಪ್ರಶಂಸನೀಯ, ಇದಕ್ಕೆ ನಮ್ಮ ಸರಕಾರದ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.

Also Read  ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ದುರ್ಮರಣ

error: Content is protected !!
Scroll to Top