ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ.

ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Also Read  ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ

 

 

error: Content is protected !!
Scroll to Top