(ನ್ಯೂಸ್ ಕಡಬ) newskadaba.com ಮುಂಬೈ, ಡಿ. 04. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರ ಹೆಸರನ್ನು ಅನುಮೋದಿಸಲಾಗಿತ್ತು. ಇದೀಗ ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ಮಹಾರಾಷ್ಟ್ರದ ಸಿಎಂ ಆಗಲಿದ್ದಾರೆ. ಈ ಮೂಲಕ ಅವರು ಸಂಪೂರ್ಣ ಸ್ಥಾನಮಾನ ಮತ್ತು ಪ್ರಭಾವದೊಂದಿಗೆ ಮಹಾರಾಷ್ಟ್ರ ರಾಜಕೀಯಕ್ಕೆ ಮರಳಿದ್ದಾರೆ.