(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, . 04. ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಿತ್ರನಟ ಉಪೇಂದ್ರ ಅವರು ನಗರದ ಬಿವಿಬಿ ಕಾಲೇಜಿನಲ್ಲಿ ಚಾಲನೆ ನೀಡಿದರು.
ಇಲ್ಲಿನ ಬಿವಿಬಿ ಕಾಲೇಜಿನಿಂದ ತೋಳನಕೆರೆವರೆಗೆ ವಾಕಥಾನ್ ಮೂಲಕ ತೆರಳಿದ ಉಪೇಂದ್ರ ಅವರು ಹುಧಾ ಅವಳಿ ನಗರದ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಸಹಭಾಗಿತ್ವದಲ್ಲಿ ಅಪರಾಧ ತಡೆ, ಸಂಚಾರ ನಿಯಮ ಮತ್ತು ಮಾದಕ ವಸ್ತು ಬಳಕೆ ವಿರುದ್ಧ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುವ ಮೂಲಕ ಅಭಿಯಾನ ನಡೆಸಿದರು. ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯಾಪ್ರಭು, ಹುಧಾ ಪೆÇಲೀಸ್ ಆಯುಕ್ತರಾದ ಎನ್.ಶಶಿಕುಮಾರ್, ಪೋಲೀಸ್ ಅಧಿಕಾರಿಗಳು, ಕಾಲೇಜುಗಳ ಆಡಳಿತ ಮಂಡಳಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.