ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, . 05.  ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.4ರಂದು ಆದೇಶ ಹೊರಡಿಸಲಾಗಿದೆ.

ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಆ ಬಳಿಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು. ಇನ್ನು ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ಮಾಹಿತಿ ನೀಡಿದ್ದಾರೆ.

Also Read  ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್

 

error: Content is protected !!
Scroll to Top