ರಾಜ್ಯಪಾಲರ ಅಧಿಕಾರ ಮತ್ತಷ್ಟು ಕಡಿತಕ್ಕೆ ಸರ್ಕಾರ ಚಿಂತನೆ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ (ಕೆಎಸ್‌ಯು) 2000ಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುಳಿವು ನೀಡಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಗುಜರಾತ್‌ನಲ್ಲಿ ವಿವಿ ಆಡಳಿ ತಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಲಾಗಿದೆ. ಅಲ್ಲಿ ಘಟಿಕೋತ್ಸವದ ಅಧ್ಯಕ್ಷತೆ ಸೀಮಿತಗೊಳಿಸುವ ಮೂಲಕ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲರ ಪ್ರಮುಖ ಅಧಿಕಾರವನ್ನು ಕಡಿತಗೊಳಿಸಲಾಗಿದೆ.

Also Read  ಉಪ್ಪಿನಂಗಡಿ: ಬೈಕ್ - ಬಸ್ ಢಿಕ್ಕಿ ► ದಂಪತಿ ಸ್ಥಳದಲ್ಲೇ ಮೃತ್ಯು

ರಾಜ್ಯಪಾಲರ ಅಧಿಕಾರಕ್ಕೆ ಕೊಕ್: ಸಂಪುಟ ನಿರ್ಣಯ

ಬೆಂಗಳೂರು:  ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

error: Content is protected !!
Scroll to Top