ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಇಂದು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಮುಂಬೈ, . 05.  ಮಹಾರಾಷ್ಟ್ರದಲ್ಲಿ ಇಂದು ನೂತನ ಸರ್ಕಾರ ರಚನೆಯಾಗಲಿದೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಮಹಾಯುತಿ ಮೈತ್ರಿಕೂಟದ ಮೂರು ಪಕ್ಷಗಳ ನಡುವೆ ವಿವಿಧ ಇತರ ಸಚಿವಾಲಯಗಳನ್ನು ಹಂಚಲಾಗಿದೆ.ಶಿವಸೇನೆ ಪ್ರಕಾರ, ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿ ಅಜಿತ್ ಪವಾರ್ ಜೊತೆಗೆ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೊದಲು ನಿರ್ಧರಿಸಲಾಗಿತ್ತು. ಆದರೆ, ಈಗ ಇಬ್ಬರು ಡಿಸಿಎಂಗಳು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಲಾಗಿದೆ. ಇಂದು ಸಂಜೆ 5:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

Also Read  ಮಾರ್ಚ್ 1 ರಿಂದ 8 ದಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೂ. 9 ಕೋಟಿ ವೆಚ್ಚದಲ್ಲಿ ಆಯೋಜನೆ

 

error: Content is protected !!
Scroll to Top