ದರ್ಶನ್ ಮಧ್ಯಂತರ ಜಾಮೀನು ಅರ್ಜಿ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 05.  ದರ್ಶನ್ ಮಧ್ಯಂತರ ಜಾಮೀನು ಅರ್ಜಿಯನ್ನು ರದ್ದು ಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಶೀಘ್ರವೇ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರ ಬಂದು ಇದೀಗ ಆಸ್ಪತ್ರೆಯಲ್ಲಿ ಇದ್ದಾರೆ. ಅವರಿಗೆ ಅಲ್ಲಿ ಫಿಸಿಯೋ ಥೆರೆಪಿ ಮಾಡಿಸಲಾಗುತ್ತಿದ್ದು ಶೀಘ್ರವೇ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ. ಡಿ. 6 ಅಥವಾ ಡಿ. 9 ರಂದು ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ.

Also Read  ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

 

error: Content is protected !!
Scroll to Top