(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನಿಗೆ ತೀವ್ರ ಗಾಯವಾಗಿದ್ದು, ಚಾಲಕ ಪರಾರಿಯಾದ ಘಟನೆ ಹರೇಕಳದಲ್ಲಿ ಬುಧವಾರ ನಡೆದಿದೆ.
ಹರೇಕಳ ಗ್ರಾಮ ಪಂಚಾಯಿತಿ ಬಳಿಯ ನಿವಾಸಿ ಅಬ್ದುಲ್ ಕಲಾಂ ಎಂಬವರ ಪುತ್ರ ಮುಹಮ್ಮದ್ ಶಯಾನ್ ಗಾಯಾಳು. ಬಾಲಕ ಹರೇಕಳ ಪಾವೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಬುಧವಾರ ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಬಾಲಕನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.