(ನ್ಯೂಸ್ ಕಡಬ) newskadaba.com ಬೆಂಗಳೂರು, . 05. ಮಹತ್ವದ ಬೆಳವಣಿಗೆಯೊಂದರಲ್ಲಿ, ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆಯೊಡ್ಡಿದೆ.
ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ನೀಡಲಾಗುತ್ತಿತ್ತು. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರೀಡಾ ಸಾಧಕರಿಗೆ ಶೇ 2 ರ ಮೀಸಲಾತಿ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ತಾತ್ಕಾಲಿಕ ತಡೆ ನೀಡಿ ಸುತ್ತೋಲೆ ಹೊರಡಿಸಿದೆ.