ಕಬ್ಬಿಣದ ಗೇಟ್ ಮೈಮೇಲೆ ಉರುಳಿಬಿದ್ದು 6 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅಂಕೋಲಾ, . 05.  ಮನೆ ಎದುರಿನ ಗೇಟ್ ಹತ್ತಿ ಆಟವಾಡುತ್ತಿದ್ದ ವೇಳೆ ಕಬ್ಬಿಣದ ಗೇಟ್ ಬಿದ್ದು ಮೈಮೇಲೆ ಉರುಳಿಬಿದ್ದ ಪರಿಣಾಮ ಆರು ವರ್ಷದ ಬಾಲಕ ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ಕನಸೆಗದ್ದೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಕನಸೆಗದ್ದೆಯ ಜಾವೇದ್ ಶೇಖ್ (6) ಎಂದು ಗುರುತಿಸಲಾಗಿದೆ.

ಪಟ್ಟಣದ ಉರ್ದು ಮಾಧ್ಯಮದ ಶಾಲೆಯ ಒಂದನೇ ತರಗತಿಗೆ ವಿದ್ಯಾರ್ಥಿಯಾಗಿದ್ದ ಈತ ಮನೆಯ ಎದುರಿನ ಗೇಟನಲ್ಲಿ ತನ್ನ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಕ್ಷಣ ಮಗುವನ್ನು ಅಂಕೋಲಾ ಖಾಸಗಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಕೊನೆಯುಸಿರೆಳೆದಿದೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ

 

error: Content is protected !!
Scroll to Top