ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07. ಈರುಳ್ಳಿ, ಬೆಳ್ಳುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ರಿಟೇಲ್​​ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿ ಇದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್​ನಲ್ಲಿ 70 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಎಪಿಎಂಸಿಯಲ್ಲಿ ಹೋಲ್​ಸೇಲ್ ನಲ್ಲಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ.

ಈರುಳ್ಳಿ ಬೆಲೆ ನೂರರ ಗಡಿ ತಲುಪುವ ಸಾಧ್ಯತೆ ಇದೆ. ಈಗಾಗಲೇ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಧಾರಣ ಈರುಳ್ಳಿ ಕೆಜಿಗೆ 40 ರಿಂದ 50 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಇತ್ತ ಉತ್ತಮ ಗುಣಮಟ್ಟದ ಈರುಳ್ಳಿ ಕೆಜಿಗೆ 60 ರಿಂದ 70 ರೂಪಾಯಿಗೆ ಮಾರಾಟವಾಗುತ್ತದೆ. ಸಣ್ಣಪುಟ್ಟ ಮಾರುಕಟ್ಟೆಯಲ್ಲಿ, ರಸ್ತೆಬದಿಯಲ್ಲಿ ಸಾಮಾನ್ಯ ಈರುಳ್ಳಿ ಕೆಜಿಗೆ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಕೆಜಿಗೆ 70 ರಿಂದ 80 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಬೆಳ್ಳುಳ್ಳಿ ದರ ಈಗಾಗಲೇ ಅರ್ಧಶತಕ ಬಾರಿಸಿ ಮುನ್ನುಗ್ಗುತ್ತಿದೆ. ಎಪಿಎಂಸಿಯಲ್ಲಿ ಸಾಮಾನ್ಯ ಬೆಳ್ಳುಳ್ಳಿಗೆ 400 ರಿಂದ 450 ರುಪಾಯಿಗೆ ಮಾರಾಟವಾಗುತ್ತಿದೆ. ಇತ್ತ ರಿಟೇಲ್ ಮಾರುಕಟ್ಟೆಯಲ್ಲಿ, ಅಂದರೆ ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣಪುಟ್ಟ ಮಾರುಕಟ್ಟೆಗಳಲ್ಲಿ ಸಾಮಾನ್ಯ ಬೆಳ್ಳುಳ್ಳಿ ಕೆಜಿಗೆ 450 ರಿಂದ 500 ರೂಪಾಯಿಗೆ ಮಾರಾಟವಾಗುತ್ತಿದೆ. ಫಸ್ಟ್‌ ಕ್ವಾಲಿಟಿ ಬೆಳ್ಳುಳ್ಳಿ ಕೆಜಿಗೆ 550 ರಿಂದ 600 ರೂಪಾಯಿವರೆಗೆ ಮಾರಾಟವಾಗುತ್ತಿದೆ.

Also Read  ಇಂದು ಕಲ್ಲಡ್ಕಕ್ಕೆ ಮುಖ್ಯಮಂತ್ರಿ ಭೇಟಿ

 

error: Content is protected !!
Scroll to Top