ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣ:  ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 07. ಬಳ್ಳಾರಿಯ ಜಿಲ್ಲಾ ಆಸ್ಪತ್ರೆ(ಬಿಮ್ಸ್‌)ಯಲ್ಲಿ ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣಗಳ ಸಂಬಂಧ ಬಿಮ್ಸ್‌ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಎಸ್​ಪಿ ಸಿದ್ದರಾಜು ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಗಳ ತಂಡ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್​, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಬಿಮ್ಸ್​​ ಆಸ್ಪತ್ರೆಯಲ್ಲಿ ಒಂದು ತಿಂಗಳ ಅಂತರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಈ ಸಂಬಂಧ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಮತ್ತು ಎಂಎಲ್​​ಸಿ ರವಿಕುಮಾರ್​ ಒಳಗೊಂಡ ನಿಯೋಗ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿತ್ತು.

Also Read  ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!!

 

error: Content is protected !!
Scroll to Top