ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಶುರು

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 09. ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಲಿದೆ.

10 ದಿನಗಳವರೆಗೆ  ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮುಡಾ, ವಾಲ್ಮೀಕಿ, ಅಬಕಾರಿ, ವಕ್ಫ್, ಬಾಣಂತಿಯರ ಸಾವು ಪ್ರಕರಣಗಳು ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸುವ ಸಾಧ್ಯತೆ ಇದೆ.ವಿಪಕ್ಷಗಳು ಸರ್ಕಾರದ ಮೇಲೆ ಮುಗಿ ಬೀಳಲು ಸಜ್ಜಾಗಿವೆ. ಇನ್ನೊಂದೆಡೆ ವಿಪಕ್ಷಗಳನ್ನು ಕೂಡ ಕಟ್ಟಿ ಹಾಕಲು ಸರ್ಕಾರವೂ ರೆಡಿಯಾಗಿದೆ. ವಿಪಕ್ಷಗಳ ಹಗರಣಗಳನ್ನು ಮುಂದಿಟ್ಟುಕೊಂಡು ಸರ್ಕಾರ ಕೌಂಟರ್ ನೀಡಲು ತಯಾರಾಗಿದೆ. ಸದನದ ಒಳಗೆ ಆಡಳಿತ ವಿಪಕ್ಷಗಳ ವಾಗ್ವದವು  ಒಂದು ಕಡೆಯಾದರೆ ಸದನದ ಹೊರಗಡೆಯೂ ಸಮರ ಜೋರಾಗಿರಲಿದೆ. ಪಂಚಮಸಾಲಿ 2ಎ ಮೀಸಲಾತಿ ಹೋರಾಟ, ರೈತರ ಪ್ರತಿಭಟನೆ ಕೂಡ ನಡೆಯುತ್ತಿದೆ.ಅಧಿವೇಶನದಲ್ಲಿ ಬಿಬಿಎಂಪಿ ವಿಧೇಯಕ, ರಾಜ್ಯಪಾಲರ ಅಧಿಕಾರ ಮೊಟಕು ಮಾಡುವ ಗ್ರಾಮೀಣಾಭಿವೃದ್ಧಿ ವಿವಿ ವಿಧೇಯಕ ಸೇರಿ 15ಕ್ಕೂ ಹೆಚ್ಚು ಮಸೂದೆಗಳು ಮಂಡನೆ ಆಗಲಿವೆ.

Also Read  ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಗೆ ವಿಷ ಉಣಿಸಿ ಹತ್ಯೆ

error: Content is protected !!
Scroll to Top