(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ. 09. ರಸ್ತೆ ಬದಿಯಲ್ಲಿ ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆಯು ಪರ್ಕಳ ಎಸ್‌ಬಿಐ ಬ್ಯಾಂಕಿನ ಎದುರು ನಡೆದಿದೆ.
ಮೃತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ ದೇವು ಪೂಜಾರಿ ಎಂಬವರ ಮಗ ಸೃಜನ್ ಸಾಗರ್ ಎಂದು ಗುರುತಿಸಲಾಗಿದೆ. ಟೈಯರ್ ಸಿಡಿದ ಟ್ಯಾಂಕರ್ ಲಾರಿಯನ್ನು ಚಾಲಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಸೃಜನ್, ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ. ಇವರು ಮಣಿಪಾಲದ ಕೆಎಂಸಿಯಲ್ಲಿ ಇತ್ತೀಚೆಗೆ ಉದ್ಯೋಗಕ್ಕೆ ಸೇರಿಕೊಂಡಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.