ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com , ಡಿ. 09. ನವದೆಹಲಿ:  ದೆಹಲಿಯಲ್ಲಿರುವ  ಹಲವು ಖಾಸಗಿ ಶಾಲೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ತ್ವರಿತ ಕ್ರಮಕ್ಕೆ ಮುಂದಾಗಿದ್ದಾರೆ.

ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ ಡಾಲರ್ ಹಣ ನೀಡಬೇಕು ಇಲ್ಲದಿದ್ದರೆ ಶಾಲಾ ಕಟ್ಟಡಗಳ ಒಳಗೆ ಹಾಕಲಾದ ಸ್ಫೋಟಕಗಳನ್ನು ಸ್ಫೋಟಿಸುವುದಾಗಿ ಭೀತಿ ಹುಟ್ಟಿಸಲಾಗಿದೆ. ಕಳುಹಿಸಲಾಗಿರುವ ಬೆದರಿಕೆ ಮೇಲ್‌ನಲ್ಲಿ, ನಾನು ಶಾಲೆಗಳ ಕಟ್ಟಡಗಳ ಒಳಗೆ ಅನೇಕ ಬಾಂಬ್‌ಗಳನ್ನು ಇಟ್ಟಿದ್ದೇನೆ. ಬಾಂಬ್‌ಗಳು ಚಿಕ್ಕದಾಗಿದ್ದು ಅಡಗಿಸಿ ಇಡಲಾಗಿದೆ. ಇದರಿಂದ ಕಟ್ಟಡಕ್ಕೆ ಹೆಚ್ಚಿನ ಹಾನಿಯಾಗುವುದಿಲ್ಲ, ಆದರೆ ಬಾಂಬ್‌ಗಳನ್ನು ಸ್ಫೋಟಿಸುವಾಗ ಅನೇಕ ಜನರು ಗಾಯಗೊಳ್ಳಬಹುದು. ನನಗೆ 30 ಸಾವಿರ ಡಾಲರ್ ಹಣ ಬರದಿದ್ದರೆ ಬಾಂಬ್ ಸ್ಫೋಟಿಸುತ್ತೇನೆ ಎಂದು ಬೆದರಿಕೆ ಹಾಕಲಾಗಿದೆ.

Also Read  ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್

ಈ ಇಮೇಲ್ ನಿನ್ನೆ ಡಿಸೆಂಬರ್ 8 ರಂದು ರಾತ್ರಿ 11:38 ರ ಸುಮಾರಿಗೆ ಬಂದಿದೆ. ದೆಹಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಇತರ ತುರ್ತು ಸೇವೆಗಳ ಸಹಯೋಗದೊಂದಿಗೆ ತಕ್ಷಣದ ತನಿಖೆಗಳು ಮತ್ತು ಶೋಧ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ.

error: Content is protected !!
Scroll to Top