ಮುಂದಿನ ಚುನಾವಣೆಯಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.25. 2018 ರ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿಯ ಶಾಸಕರು ಇದಕ್ಕೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೆ ಬಿಜೆಪಿಯು ಸುಳ್ಯ ಕ್ಷೇತ್ರಕ್ಕೆ ಏನು ಮಾಡಿದೆ ಎಂಬುದು ಜನರಿಗೆ ತಿಳಿದಿದೆ. ಸುಳ್ಯದಲ್ಲಿ ಪಶು ವೈದ್ಯಕೀಯ ಕಾಲೇಜು, ಕಡಬ ಪ್ರತ್ಯೇಕ ತಾಲೂಕು ಆಗಿ ಘೋಷಣೆ ಹಾಗೂ ಇತರ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕಾಂಗ್ರೆಸ್ ವತಿಯಿಂದ ಮಾಡಲಾಗಿದೆ. ಇದರಿಂದಾಗಿ ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮಾತನಾಡುತ್ತಾ, ರಾಹುಲ್ ಗಾಂಧಿಯವರು ಮತ್ತೆ ದ.ಕ. ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಇತ್ತೀಚಿನ ಅವರ ಕರಾವಳಿ ಭೇಟಿಗೆ ನಿರೀಕ್ಷೆಗೂ ಮೀರಿ ಜನಬೆಂಬಲ ದೊರಕಿದೆ ಎಂದರು.

Also Read  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಎನ್ಐಎ ದಾಳಿ

error: Content is protected !!
Scroll to Top