(ನ್ಯೂಸ್ ಕಡಬ) newskadaba.com , ಡಿ. 09.ಬೆಳಗಾವಿ: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು.
ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ ಮರಣಗಳು ಆಗುತ್ತಿವೆ, ಅದಕ್ಕೆ ವೈದ್ಯಕೀಯ ಕಾರಣ ಎನ್ನಲಾಗದು. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಅವರು ವಿರೋಧ ಪಕ್ಷಗಳ ವಿರುದ್ದ ಕಿಡಿ ಕಾರಿದರು.