(ನ್ಯೂಸ್ ಕಡಬ) newskadaba.com . 09. ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆಯನ್ನು ಇಂದು ಸದನದಲ್ಲಿ ಔಪಚಾರಿಕವಾಗಿ ಘೋಷಿಸಲಾಯಿತು.
ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ನಾಮಪತ್ರ ಸಲ್ಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು. ಮೂರು ದಿನಗಳ ವಿಶೇಷ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸ್ಥಾನ ಮತ್ತು ಉಪ ಸಭಾಪತಿ ಸ್ಥಾನವನ್ನು ಪ್ರತಿಪಕ್ಷ ಎಂವಿಎ ಕೋರಿದೆ.