’ಎಸ್‌ಎಂಕೆ ಐಟಿ ಬಿಟಿ ಕೊಡುಗೆಗೆ ಕರ್ನಾಟಕ ಸದಾ ಋಣಿ’- ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com . 10. ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಕೃಷ್ಣ ಅವರು ಕರ್ನಾಟಕಕ್ಕೆ ನೀಡಿದ ಕೊಡುಗೆಗಳನ್ನು ನೆನಪಿಸಿಕೊಂಡಿದ್ದಾರೆ.


ಎಸ್.ಎಂ.ಕೃಷ್ಣ ಅವರ ಸಾವಿನಿಂದ ನಾನು ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ

Also Read  ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ

 

error: Content is protected !!
Scroll to Top