ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಕೊಲೆ ಬೆದರಿಕೆ..!

(ನ್ಯೂಸ್ ಕಡಬ) newskadaba.com . 10. ಹೈದರಾಬಾದ್‌ :ಆಂದ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ ಕಿಡಿಗೇಡಿಗಳಿಂದ ಬೆದರಿಕೆ ಕರೆಗಳು ಬಂದಿವೆ ಎಂದು ಹೇಳಲಾಗುತ್ತಿದ್ದು, ಅವರನ್ನು ಕೊಲ್ಲುವುದಾಗಿ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಉಪಮುಖ್ಯಮಂತ್ರಿ ಅವರನ್ನು ಗುರಿಯಾಗಿಸಿಕೊಂಡು ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಹೇಳಲಾಗಿದೆ.

ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ , ಪವನ್‌ ಕಲ್ಯಾಣ್‌ ಅವರನ್ನು ಕೊಲ್ಲುವುದಾಗಿ ಆಕ್ಷೇಪಾರ್ಹ ಭಾಷೆಯಲ್ಲಿ ಆರೋಪಿ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ. ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಸೆಲ್ ಎಪಿ ಸೆಕ್ರೆಟರಿಯೇಟ್‌ನ ಎರಡನೇ ಬ್ಲಾಕ್‌ನಲ್ಲಿದೆ. ಪವನ್ ಕಲ್ಯಾಣ್ ಇಲ್ಲದಿದ್ದಾಗ, ಅವರ ಸಿಬ್ಬಂದಿಗೆ ಅವರನ್ನು ಕೊಲ್ಲುತ್ತೇವೆ ಪಕ್ಕದಲ್ಲೇ ಇದ್ದೇವೆ ಎಂದು ಬೆದರಿಕೆ ಕರೆಗಳು ಮತ್ತು ಸಂದೇಶಗಳು ಬಂದವು. ಇದಲ್ಲದೇ ಇದರಲ್ಲಿ ಪವನ್‌ಗೆ ಅಸಭ್ಯ ಭಾಷೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಇದರಿಂದ ಅವರ ಸಿಬ್ಬಂದಿ ಆತಂಕಗೊಂಡು. ಈ ವಿಷಯವನ್ನು ಪವನ್ ಕಲ್ಯಾಣ್ ಅವರ ಗಮನಕ್ಕೆ ತಂದಿದ್ದಾರೆ. ಅವರ ಸಲಹೆಯಂತೆ ಸಿಬ್ಬಂದಿ ಉನ್ನತ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Also Read  ನೆಲ್ಯಾಡಿ: ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ➤ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ

error: Content is protected !!
Scroll to Top