ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮ- ಉದ್ಘಾಟನೆ

(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನದ ಕಾರ್ಯಕ್ರವು ಸೋಮವಾರ ಉರ್ವ, ಗಾಂಧಿನಗರ ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್ ತಿಮ್ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉರ್ವ, ಗಾಂಧಿನಗರ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರ್ಮಿಳಾ ಡಿ’ಸೋಜ ವಹಿಸಿದ್ದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ|| ರಾಜೇಶ್ ಬಿ.ವಿ ಇವರು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನದ ಬಗ್ಗೆ ಪ್ರಸ್ತಾವಿಕ ಮಾತನಾಡಿದರು.

Also Read  Breaking News ► ಕಡೇಶಿವಾಲಯ ದೇವಸ್ಥಾನದಲ್ಲಿ ಕಳ್ಳತನ

ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕ, ಡಾ|| ಶಿವಪ್ರಕಾಶ್ ಡಿ.ಎಸ್., ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ವೈದ್ಯಕೀಯ ಅಧೀಕ್ಷಕ, ಡಾ|| ದುರ್ಗಾಪ್ರಸಾದ್ ಎಂ.ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಉಸ್ಮಾನ್, ಸಾರ್ವಜನಿಕ ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ನಿರೂಪಿಸಿದರು. ತಾಲೂಕು ಆರೋಗ್ಯಾಧಿಕಾರಿ ಮಂಗಳೂರು ಡಾ|| ಸುಜಯ್ ಕುಮಾರ್ ವಂದಿಸಿದರು.

error: Content is protected !!
Scroll to Top