ಎಸ್.ಎಂ.ಕೃಷ್ಣ ಗೌರವಾರ್ಥ ವಿಧಾನ ಮಂಡಲದ ಅಧಿವೇಶನ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಳಗಾವಿ, . 10. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಒಂದು ದಿನ ಮುಂದೂಡಲಾಗಿದೆ.

ರಾಜ್ಯ ಸರಕಾರವು ಬುಧವಾರ ಸರಕಾರಿ ರಜೆ ಘೋಷಿಸಿರುವುದರಿಂದ ಅಂದು ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಕಾರ್ಯಕಲಾಪಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಗುರುವಾರ ಪೂರ್ವಾಹ್ನ 11 ಗಂಟೆಗೆ ಸೇರುವಂತೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದ್ದಾರೆ.

Also Read  ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..!

 

                                                             

 

error: Content is protected !!
Scroll to Top