ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಡಿ. 10. ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಸಾಕ್ಷರತಾ ಸಂಘದ ಮೂಲಕ ನಿಗದಿಪಡಿಸಿದ ಕಡಬ ತಾಲೂಕು ಮಟ್ಟದ ಸ್ಪರ್ಧೆಗಳು ರಾಮಕುಂಜದ ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಡಬದ ಸೈಂಟ್ ಜೋಕಿಮ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎರಡು ಪ್ರಥಮ ಹಾಗೂ ಎರಡು ದ್ವಿತೀಯ ಸ್ಥಾನಗಳನ್ನು ಗಳಿಸಿದರು. ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಆಯಿಷತ್ ಅಫ್ರಾ ಪ್ರಥಮ ಸ್ಥಾನ ಹಾಗೂ ಭಿತ್ತಿ ಚಿತ್ರ ರಚನೆಯಲ್ಲಿ ಸಿಂಚು ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಖದೀಜತ್ ಶಮ್ಮಾ ದ್ವಿತೀಯ ಸ್ಥಾನ ಹಾಗೂ ರಸಪ್ರಶ್ನೆಯಲ್ಲಿ ಸಾನಿಕಾ ಮತ್ತು ಫಾತಿಮಾತ್ ಸಜಾ ದ್ವಿತೀಯ ಸ್ಥಾನ ಗಳಿಸಿದರು. ವಿಜೇತ ವಿದ್ಯಾರ್ಥಿಗಳನ್ನು ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿ’ಸೋಜ ಹಾಗೂ ಪ್ರಾಂಶುಪಾಲರಾದ ಕಿರಣ್ ಕುಮಾರ್ ವಿ ಅಭಿನಂದಿಸಿದರು.

error: Content is protected !!
Scroll to Top