ಕರಾವಳಿಯ ಯುವಕ ದುಬೈನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.25. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೋರ್ವ ದುಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಉಡುಪಿಯ ಕೊಳಂಬೆ ನಿವಾಸಿ ರಾಘವೇಂದ್ರ ಭಂಡಾರಿ (35) ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ದುಬೈನಲ್ಲಿ ದುಡಿಯುತ್ತಿದ್ದ ಅವರು ಇತ್ತೀಚೆಗಷ್ಟೆ ಮದುವೆಯಾಗಿದ್ದರು. ಶನಿವಾರದಂದು ರಾತ್ರಿ ದುಬೈನ ಹೋಟೆಲೊಂದರಲ್ಲಿ ತಂಗಿದ್ದ ರಾಘವೇಂದ್ರ ಊರಿನಲ್ಲಿರುವ ಸಹೋದರರಿಗೆ ಕರೆ ಮಾಡಿ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ವೈಯಕ್ತಿಕ ಕಾರಣದಿಂದ ಮನನೊಂದು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Also Read  ಮರಕ್ಕೆ ಸ್ಕೂಟರ್ ಢಿಕ್ಕಿ- ಸವಾರ ಮೃತ್ಯು..!

error: Content is protected !!
Scroll to Top