ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com . 10. ನವದೆಹಲಿ: ಬರ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (NDRF) ಆರ್ಥಿಕ ನೆರವು ಬಿಡುಗಡೆ ವಿವಾದವನ್ನು ಕೇಂದ್ರ ಹಾಗೂ ಕರ್ನಾಟಕ ಸರ್ಕಾರ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ಎನ್ ಡಿಆರ್ ಎಫ್ ನಿಂದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಇಲ್ಲಿಯವರೆಗೂ ಎಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಳಿತು. ಇದಕ್ಕೆ ಉತ್ತರಿಸಿದ ಕರ್ನಾಟಕ ಪರ ವಕೀಲರು, ರಾಜ್ಯ ಸರ್ಕಾರ 18, 171 ಕೋಟಿ ಬಿಡುಗಡೆಗೆ ಮನವಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ ರೂ. 3, 819 ಕೋಟಿ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ, ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಲು ಸ್ವಲ್ಪ ಕಾಲಾವಕಾಶದ ಅಗತ್ಯವಿದೆ ಎಂದು ನ್ಯಾಯಪೀಠದ ಮುಂದೆ ಮನವಿ ಮಾಡಿದರು. ನೀವೇ ಅದನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿತು.

Also Read  ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಸೋಂಕಿಗೆ 9 ಮಂದಿ ಬಲಿ ➤ 806 ಮಂದಿಗೆ ಪಾಸಿಟಿವ್, 858 ಮಂದಿ ಬಲಿ

error: Content is protected !!
Scroll to Top