ಇಂದು ಎಸ್‌ಎಂಕೆ ಅಂತ್ಯಕ್ರಿಯೆ: ಭದ್ರತೆಗೆ 1,000ಕ್ಕೂ ಅಧಿಕ ಪೊಲೀಸರ ನಿಯೋಜನೆ

(ನ್ಯೂಸ್ ಕಡಬ) newskadaba.com ಡಿ. 11.  ಕರುನಾಡು ಕಂಡ ಅದಮ್ಯ ಚೇತನ, ಮಾಜಿ ಸಿಎಂ ಎಸ್‌.ಎಂ ಕೃಷ್ಣ  ಅವರು ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ ನಡೆಯಲಿದೆ. ಈ ಹಿನ್ನೆಲೆ ಅಂತ್ಯಕ್ರಿಯೆ ಸ್ಥಳದಲ್ಲಿ ಸುಮಾರು 1,000ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಕೃಷ್ಣರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತಿದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆ ಸ್ಥಳದಲ್ಲಿ ಡಿಐಜಿ ಬೋರಲಿಂಗಯ್ಯ, ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ನಿಯೋಜಿಸಲಾಗಿದೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 700ಕ್ಕೂ ಹೆಚ್ಚು ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಇದರೊಂದಿಗೆ ಕೆಎಸ್‌ಆರ್‌ಪಿ, ಡಿಎಆರ್‌ ತುಕಡಿ ಸೇರಿ 1,000ಕ್ಕೂ ಹೆಚ್ಚು ಪೊಲೀಸ್‌ ನಿಯೋಜನೆ ಮಾಡಲಾಗಿದೆ. ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿದೆ.

Also Read  ಕರಾವಳಿಯಲ್ಲಿ ಮುಂದುವರಿದ ಮಳೆ ➤ ಶನಿವಾರ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

 

error: Content is protected !!
Scroll to Top