ಲಿಂಗಾಯತ ಪಂಚಮಸಾಲಿ ಲಾಠಿಚಾರ್ಜ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) newskadaba.com .ಡಿ. 11. ಬೆಳಗಾವಿ: ಬೆಳಗಾವಿ  ಸುವರ್ಣಸೌಧದ  ಮುಂದೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಮಾಡಿದ್ದನ್ನು ಖಂಡಿಸಿ ಡಿಸೆಂಬರ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ ಘೋಷಣೆ ಮಾಡಲಾಗಿದೆ.

ಲಾಠಿಚಾರ್ಜ್‌ ಮಾಡಿದ ಸರ್ಕಾರದ ಕ್ರಮವನ್ನು ಖಂಡಿಸಿ ನಾಳೆ ರಾಜ್ಯದಾದ್ಯಂತ ಹೋರಾಟ ಮಾಡಲು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ನಿನ್ನೆ ಸುವರ್ಣಸೌಧದ ಮುಂದೆ ನಡೆಯುತ್ತಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ಮಂಗಳವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ‘ನಮ್ಮ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ನೀವು ಮಾಡಿದ ದಬ್ಬಾಳಿಕೆಯಿಂದ ಈ ಹೋರಾಟ ರಾಜ್ಯದಾದ್ಯಂತ ತೀವ್ರ ಸ್ವರೂಪ ಪಡೆಯಲಿದೆ. ತಡೆದು ತೋರಿಸಿ’ ಎಂದು ಸವಾಲು ಹಾಕಿದರು. ಅಲ್ಲದೇ ಅನಗತ್ಯವಾಗಿ ಲಾಠಿ ಚಾರ್ಜ್ ಮಾಡಿದ ಬೆಳಗಾವಿ ಪೊಲೀಸ್ ಆಯುಕ್ತ ಹಾಗೂ ಎಸ್ಪಿಯನ್ನು ಅಮಾನತು ಮಾಡಬೇಕೆಂದು ಅವರು ಒತ್ತಾಯಿಸಿದರು.

Also Read  ಬೈಕ್ ಅಪಘಾತ- ಸವಾರ ಮೃತ್ಯು..! ➤‌ ರಸ್ತೆ ಗುಂಡಿಗೆ ಮತ್ತೊಂದು ಬಲಿ

error: Content is protected !!
Scroll to Top