ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 11. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಯೆನೆಪೋಯ ಪದವಿಪೂರ್ವ ಕಾಲೇಜು ಜಪ್ಪಿನಮೊಗರು ಎಂಬಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, ಮಾದಕ ವಸ್ತು ದುಷ್ಪರಿಣಾಮಗಳು ಹಾಗೂ ಮಾನವ ಕಳ್ಳಸಾಗಣಿಕೆ ತಡೆ ಕುರಿತು ಕಾಲೇಜನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಲಾಯಿತು..

ಕಾರ್ಯಕ್ರಮವನ್ನು ಮಂಗಳೂರು ವಿಭಾಗ, ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯ ಸುಲ್ತಾನ ಉದ್ಘಾಟಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಮಿಕ ಅಧಿಕಾರಿ ಬಿ.ಆರ್ ಕುಮಾರ್, ಹಿರಿಯ ಕಾರ್ಮಿಕ ನಿರೀಕ್ಷಕ ವಿರೇಂದ್ರ ಕುಂಬಾರ್, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ ಕಾಯ್ದೆ) ಬಗ್ಗೆ ಮಾಹಿತಿ ನೀಡಿದರು.

Also Read  ಉಳ್ಳಾಲ: 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ➤ ನರ್ಸಿಂಗ್ ಕಾಲೇಜು ಸೀಲ್ ಡೌನ್..!

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕ, ಶುಕರಾಜ್ ಎಸ್ ಕೊಟ್ಟಾರಿ, ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಹಾಗೂ ಪೊಲೀಸ್ ಸಬ್‍ ಇನ್ಸ್ಪೆಕ್ಟರ್ ಕೃಷ್ಣ ಅವರು ಮಾದಕ ವಸ್ತುಗಳ ದುಷ್ಪಾರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೆನೆಪೋಯ ಪಿ.ಯು ಕಾಲೇಜು ಪ್ರಾಂಶುಪಾಲ ಉಜ್ಜಲ್ ರೊಡ್ನಿ ಮೆನೆಜಿಸ್ ವಹಿಸಿದ್ದರು. ಈ ಸಂದರ್ಭದಲ್ಲಿ ಬಾಲಕಾರ್ಮಿಕ ಕಾಯ್ದೆಗೆ ಸಂಬಂಧ ಪಟ್ಟಂತೆ ಭಿತ್ತಿಪತ್ರವನ್ನು ಅನಾವರಣಗೊಳಿಸಲಾಯಿತು.

error: Content is protected !!
Scroll to Top