ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು

Death, deadbody, Waterfall

(ನ್ಯೂಸ್ ಕಡಬ) newskadaba.com ಡಿ. 11. ಪ್ರವಾಸಕ್ಕೆಂದು ಬಂದಿದ್ದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಮುರುಡೇಶ್ವರ ಬೀಚ್ ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋದ ಪ್ರಕರಣಕ್ಕೆ ಸಂಬಂಧಿಸಿ ಶಾಲಾ ಶಿಕ್ಷಕರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ.  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಸಮುದ್ರಪಾಲಾದ ಉಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕರು ವಸತಿ ಶಾಲೆಯ ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ಸಿಬ್ಬಂದಿಗಳನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದ್ದು, ನಿರ್ಲಕ್ಷತನ ಹಾಗೂ ಬೇಜಾಬ್ದಾರಿತನದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Also Read  ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಈ ಮಧ್ಯೆ ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

 

error: Content is protected !!
Scroll to Top