RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 11. ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದಿನಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ.

ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, RBIನ 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್‌ ನೇಮಕಗೊಂಡಿದ್ದರು. ಮೂರು ವರ್ಷ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಅವರನ್ನೇ ಮುಂದುವರಿಸಲಾಗಿತ್ತು.

Also Read  ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

 

error: Content is protected !!