(ನ್ಯೂಸ್ ಕಡಬ) newskadaba.com ಡಿ. 11. ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ನಡೆದಿದೆ.
ಮೃತ ದಂಪತಿಯನ್ನು ಮರಕುಂಬಿ ಗ್ರಾಮದ ನಿವಾಸಿಗಳಾದ ಪತಿ ಮಂಜುನಾಥ ನಾಯಕ್(38) ಹಾಗೂ ಪತ್ನಿ ನೇತ್ರಾವತಿ ನಾಯಕ್(33) ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕಾಗಿ ದಂಪತಿ ಗಂಗಾವತಿಗೆ ಹೊರಟಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.