SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ

(ನ್ಯೂಸ್ ಕಡಬ) newskadaba.com ಡಿ.11. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಅವರಿಗೆ ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಬುಧವಾರದಂದು ತನ್ನ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

Also Read  ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

ಅವರು ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ ಎಂದು ಸ್ಮರಿಸಿದ್ದಾರೆ.

error: Content is protected !!
Scroll to Top