(ನ್ಯೂಸ್ ಕಡಬ) newskadaba.com ಡಿ. 11. ಬೆಂಗಳೂರು: ನೆರೆಯ ತಮಿಳು ನಾಡು ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪ್ರಭಾವ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ.
ಇದೇ ರೀತಿಯ ಹವಾಮಾನ ಇನ್ನೂ ಮೂರ್ನಾಲ್ಕು ದಿನ ಮುಂದುವರೆಯುವ ಸಾಧ್ಯತೆಯಿದೆ. ಕೆಲವು ದಿನಗಳ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಕೇರಳದ ಕೆಲವು ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತ ಪ್ರಭಾವದಿಂದ ವ್ಯಾಪಕ ಮಳೆಯಾಗಿ ಶಾಲೆ-ಕಾಲೇಜುಗಳಿಗೆ ರಜೆ ಸಹ ಘೋಷಿಸಲಾಗಿತ್ತು.