(ನ್ಯೂಸ್ ಕಡಬ) newskadaba.com ಡಿ. 12 ಹೊಸದಿಲ್ಲಿ: ಸೇನಾ ಸಿಬ್ಬಂದಿಯೋರ್ವರು ಜಮ್ಮು- ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಜಕೋಟೆ ಪ್ರದೇಶದ ಅಂಜನವಾಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸೇನಾ ಸಿಬ್ಬಂದಿ ಇಂದೇಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಯ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.