(ನ್ಯೂಸ್ ಕಡಬ) newskadaba.com ಡಿ. 12. ಮುರುಡೇಶ್ವರ ಸಮುದ್ರ ತೀರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.
ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಬೀಚ್ ನಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸಹಿತ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದು, ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಿ ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ನಿರ್ಲಕ್ಷ್ಯ ಕಾರಣ ಕುರಿತು ತನಿಖೆ ಕೈಗೊಂಡಿದ್ದಾರೆ.