ಫ್ಲಾಟ್, ಮಾಲ್‍ ಗಳಲ್ಲಿ ಹಸಿತ್ಯಾಜ್ಯ ಸಂಸ್ಕರಿಸಲು ಮಹಾನಗರಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 13. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ  ನೆಲೆಸಿರುವ  30ಕ್ಕಿಂತ ಹೆಚ್ಚಿನ  ಫ್ಲಾಟ್‍ ಗಳನ್ನು ಹೊಂದಿರುವ  ಅಪಾರ್ಟ್‍ ಮೆಂಟ್‍ಗಳು, 5000 ಚ.ಅಡಿಗೂ ಅಧಿಕ ವಿಸ್ತೀರ್ಣದ ಸಂಕೀರ್ಣಗಳು, ಉದ್ದಿಮೆ ಮತ್ತು ವ್ಯಾಪಾರಸ್ಥರು,  ಮಾಲ್‍ಗಳು,  ವಾಣಿಜ್ಯ ಸಂಸ್ಥೆಗಳು, ಪೂಜಾ ಸ್ಥಳಗಳು, ಸಾರ್ವಜನಿಕ ವಲಯದ ಉದ್ದಿಮೆಗಳು, ಖಾಸಗಿ ಕಂಪನಿಗಳು ಹಾಗೂ ಇನ್ನಿತರ ಇಲಾಖೆಗಳು ಪ್ರತಿನಿತ್ಯ ತಮ್ಮ ಉದ್ದಿಮೆಯಿಂದ ಸರಾಸರಿ 100 ಕೆ.ಜಿ ಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮಲ್ಲಿ ಉತ್ಪಾದನೆಯಾಗುವ ಘನ ತ್ಯಾಜ್ಯವನ್ನು 3 ವಿಧವಾಗಿ (ಹಸಿತ್ಯಾಜ್ಯ, ಒಣತ್ಯಾಜ್ಯ, ಅಪಾಯಕಾರಿ ತ್ಯಾಜ್ಯ) ಗಳಾಗಿ ವಿಂಗಡಿಸಿ, ಹಸಿ ತ್ಯಾಜ್ಯವನ್ನು ತಮ್ಮ ಆವರಣದಲ್ಲಿಯೇ ಸಂಸ್ಕರಿಸಿ (On-site Composting method) ಗೊಬ್ಬರ ಉತ್ಪತ್ತಿ ಮಾಡುವ ಕುರಿತು ಅಗತ್ಯ ಕ್ರಮವನ್ನು 2025 ಜನವರಿ 15ರ ವರೆಗೆ ಸಮಯಾವಕಾಶವನ್ನು ನಿಗದಿಪಡಿಸಲಾಗಿದೆ.

Also Read  ನಾಳೆ (ಜು. 28) ದ.ಕ ಜಿಲ್ಲೆಯಲ್ಲಿ ಯಾವುದೇ ಬಂದ್ ಗೆ ಕರೆ ಕೊಟ್ಟಿಲ್ಲ ➤ ಹಿಂಜಾವೇ ಸ್ಪಷ್ಟನೆ

ಜನವರಿ-2025ರ ಅಂತ್ಯದಲ್ಲಿ ಮ.ನ.ಪಾ ವ್ಯಾಪ್ತಿಯ ಬೃಹತ್ ತ್ಯಾಜ್ಯ ಉತ್ಪಾದಕರು ಹಸಿ ತ್ಯಾಜ್ಯವನ್ನು ತಮ್ಮ ಆವರಣದಲ್ಲಿಯೇ ಸಂಸ್ಕರಿಸಿ ವಿಲೇವಾರಿ ಮಾಡಲು  ವಿಫಲವಾದಲ್ಲಿ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು 2016 ಮತ್ತು  ಮ.ನ.ಪಾ ಘನ ತ್ಯಾಜ್ಯ ನಿರ್ವಹಣೆ ಬೈಲಾ-2019 ರ ಪ್ರಕಾರ ರೂ.15,000 ದಂಡ  ವಿಧಿಸಲಾಗುತ್ತದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಪಾಲಿಕೆಯ ವೆಬ್‍ಸೈಟ್: mangalurucity.mrc.gov.in ನಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ mcchealth2018@gmail.com ಗೆ ಇ-ಮೇಲ್ ಸಂದೇಶವನ್ನು ಕಳುಹಿಸುವಂತೆ ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top