ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಗಳ ರದ್ದು; ಸುದ್ದಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು:   2024-25ನೇ ಸಾಲಿನ ಶೈಕ್ಷಣಿಕ ಪ್ರವಾಸಗಳನ್ನು ರದ್ದು ಮಾಡಿಲ್ಲ. ಈಗಾಗಲೇ ತೆರಳಿರುವ ವಿದ್ಯಾರ್ಥಿಗಳನ್ನು ವಾಪಸು ಬರುವಂತೆ ಸೂಚಿಸಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಮುರ್ಡೇಶ್ವರದಲ್ಲಿ ನಡೆದ ಶಾಲಾ ಮಕ್ಕಳ ದುರಂತಕ್ಕೆ ಸಂಬಂಧಿಸಿ ಈ ಸುದ್ದಿ ಹಬ್ಬಿತ್ತು.

ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ರದ್ದು ಕುರಿತಂತೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಈ ರೀತಿಯ ಯಾವುದೇ ಆದೇಶ ಇಲಾಖೆ ಹೊರಡಿಸಿಲ್ಲ. ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25ನೇ ಸಾಲಿನ ಪ್ರಸ್ತುತದ ಶೈಕ್ಷಣಿಕ ಪ್ರವಾಸ ಮಾಡದಂತೆ, ಹಮ್ಮಿಕೊಂಡಿದ್ದಲ್ಲಿ ಕೂಡಲೇ ಹಿಂತಿರುಗಿ ಬರುವಂತೆ ಯಾವುದೇ ಸೂಚನೆ, ನಿರ್ದೇಶನ ನೀಡಿರುವುದಿಲ್ಲ ಎಂದಿದ್ದಾರೆ.

Also Read  ವಾಹನಗಳ ಮೇಲೆ ರಾಜಕೀಯ ಪಕ್ಷಗಳ ಫೋಟೋ ಹಾಕಿದ್ರೆ ಕೇಸ್..!

error: Content is protected !!
Scroll to Top