ಸೋಡಿಯಂ ಬಳಸಿ ಸ್ಫೋಟ ಪ್ರಕರಣ- ಡ್ರೋನ್ ಪ್ರತಾಪ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಡಿ. 13. ಡ್ರೋನ್ ಮೂಲಕ ವಿವಾದ ಸೃಷ್ಟಿಸಿ ಬಳಿಕ ಕನ್ನಡ ಬಿಗ್‌ಬಾಸ್ ಮೂಲಕ ಭಾರೀ ಜನಪ್ರಿಯತೆ ಪಡೆದುಕೊಂಡಿದ್ದ ಡ್ರೋನ್ ಪ್ರತಾಪ್, ಇದೀಗ ಸೋಡಿಯಂ ಬಳಸಿ ಸ್ಫೋಟ ನಡೆಸಿದ ಪ್ರಕರಣದಲ್ಲಿ ತುಮಕೂರು ಪೊಲೀಸರಿಂದ ಅರೆಸ್ಟ್ ಆಗಿದ್ದಾರೆ.

ಭಾರತೀಯ ದಂಡ ಸಂಹಿತೆ ಅಡಿಯ ಸೆಕ್ಷನ್ 288 ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ ಅಡಿ ಡ್ರೋನ್ ಪ್ರತಾಪ್ ವಿರುದ್ದ ಪ್ರಕರಣ ದಾಖಲಾಗಿದೆ. ಡ್ರೋನ್ ಪ್ರತಾಪ್ ಸೋಶಿಯಲ್ ಮೀಡಿಯಾದಲ್ಲಿನ ವಿಡಿಯೋಗಾಗಿ ಕೃಷಿ ಹೊಂಡದಲ್ಲಿನ ನೀರಿನಲ್ಲಿ ಸೋಡಿಯಂ ಬಳಸಿ ನೀರಿಗೆ ಸೋಡಿಯಂ ಬೆರೆತಾಗ ಹೇಗೆ ಸ್ಫೋಟಗೊಳ್ಳುತ್ತದೆ ಅನ್ನೋ ಪ್ರಯೋಗವನ್ನು ಮಾಡಿದ್ದರು. ಸೋಡಿಯಂ ಮೆಟಲ್‌ನ್ನು ಕೃಷಿ ಹೊಂಡಕ್ಕೆ ಹಾಕುತ್ತಿದ್ದಂತೆ ಭಾರಿ ಶಬ್ದದೊಂದಿಗೆ ಅದು ಸ್ಫೋಟಗೊಂಡಿತ್ತು. ಈ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪರಿಸರ ಪ್ರೇಮಿಗಳು ಸೇರಿದಂತೆ ಸಾರ್ವಜನಿಕರು ಡ್ರೋನ್ ಪ್ರತಾಪ್ ಹುಚ್ಚಾಟಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

Also Read  ಕರಾವಳಿಯಲ್ಲಿ ಮಳೆಯ ಸಿಂಚನ ➤ ರಾಜ್ಯಕ್ಕೆ ಪ್ರವೇಶಿಸಿದ ಮುಂಗಾರು

ಸೋಡಿಯಂ ಬ್ಲಾಸ್ಟ್‌ನಿಂದ ಕೃಷಿ ಹೊಂಡದಲ್ಲಿರುವ ಜಲಚರಗಳು ಸಾಯುತ್ತದೆ. ಇತ್ತ ಈ ನೀರು ತೀವ್ರ ಸೋಡಿಯಂ ರಾಸಾಯನಿಕದಿಂದ ಕೂಡಿರುವ ಕಾರಣ ವಿಷಕಾರಿಯಾಗಿದೆ. ಇದರ ಕನಿಷ್ಠ ಜ್ಞಾನವಿಲ್ಲದ ಡ್ರೋನ್ ಪ್ರತಾಪ್‌ಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹಲವರು ಆಗ್ರಹಿಸಿದ್ದರು. ವಿಡಿಯೋಗೆ ಭಾರಿ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಪ್ರತಾಪ್ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ತುಮಕೂರು ಪೊಲೀಸರು ಇದೀಗ ಡ್ರೋನ್ ಪ್ರತಾಪ್ ನ್ನು ಬಂಧಿಸಿದ್ದಾರೆ.

error: Content is protected !!
Scroll to Top