RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಮುಂಬೈ: ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿಸೆಂಬರ್ 13 ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.

ಆರ್‌ಬಿಐ ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ.ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಇ-ಮೇಲ್ ಕಳುಹಿಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!!

ಮೇಲ್ ಕಳುಹಿಸಲು ವಿಪಿಎನ್ ಅನ್ನು ಬಳಸಲಾಗಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಜೊತೆಗೆ ಇಮೇಲ್ ಕಳುಹಿಸಿದವರ ಐಪಿ ವಿಳಾಸವನ್ನು ಸಹ ಪತ್ತೆಹಚ್ಚುತ್ತಿದ್ದಾರೆ ಎಂದು ಬೆದರಿಕೆ ಇಮೇಲ್ ಕುರಿತು ಮುಂಬೈ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

error: Content is protected !!
Scroll to Top