(ನ್ಯೂಸ್ ಕಡಬ) newskadaba.com ಡಿ. 14 ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು.
ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಧನಂಜಯ ಸಿರ್ಜಿ ಮತ್ತು ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಬೇಡಿಕೆಗಳನ್ನು ಸರ್ಕಾರ ಆಲಿಸಿದ್ದು, ಅವರ ಮನವಿಗಳನ್ನು ಹಣಕಾಸು ಇಲಾಖೆಗೆ ರವಾನಿಸಲಾಗಿದೆ. ಶೀಘ್ರದಲ್ಲೇ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ಗ್ರಾಮ ಪಂಚಾಯತ್ ಸದಸ್ಯರಿಗೆ ಒತ್ತಡ ಹೇರದಂತೆ ತಿಳಿಸಲಾಗಿದೆ. ಅವರ ಬೇಡಿಕೆಗಳನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.