(ನ್ಯೂಸ್ ಕಡಬ) newskadaba.com ಡಿ. 14 ಸುಳ್ಯ: ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಆಧುನಿಕ ಸುಳ್ಯದ ಭವ್ಯ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ, ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆಯು ಡಿ.25 ಮತ್ತು 26 ರಂದು ನಡೆಯಲಿದೆ ಎಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಎನ್.ಎ. ಜ್ಞಾನೇಶ್ ತಿಳಿಸಿದ್ದಾರೆ.
ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆವಿಜಿ ಕಾನೂನು ಮಹಾ ವಿದ್ಯಾಲಯದ ವಠಾರದಲ್ಲಿ ನಡೆಯುವ ಎರಡು ದಿನಗಳ ಕಾರ್ಯಕ್ರಮದ ಅಂಗವಾಗಿ ಡಿ.25ರಂದು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಮತ್ತು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಸದಸ್ಯರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ. ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪ್ರಸಾದ್ ತುದಿಯಡ್ಕ ಉದ್ಘಾಟಿಸುವರು.