‘ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದು, ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ’- ನಟ ಅಲ್ಲು ಅರ್ಜುನ್

(ನ್ಯೂಸ್ ಕಡಬ) newskadaba.com ಡಿ. 14: ‘ಪುಷ್ಪ 2’ ಪ್ರೀಮಿಯರ್‌ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿ ನಟ ಅಲ್ಲು ಅರ್ಜುನ್‌ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದಿದ್ದಾರೆ.

ಬಳಿಕ  ಪ್ರತಿಕ್ರಿಯಿಸಿದ ಅಲ್ಲು ಅರ್ಜುನ್‌, ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಚಿಂತಿಸುವುದು ಏನೂ ಇಲ್ಲ. ನಾನು ಮತ್ತೊಮ್ಮೆ ಮೃತರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇದು ದುರದೃಷ್ಟಕರ ಘಟನೆಯಾಗಿದೆ ಎಂದರು ಹೇಳಿದರು. ಈ ರೀತಿ ಘಟನೆ ನಡೆದಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ . ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದು, ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಡಿಸೆಂಬರ್ 4 ರಂದು ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಚಂಚಲಗುಡ ಜೈಲಿನಲ್ಲಿ ಒಂದು ರಾತ್ರಿ ಕಳೆದರು. ನಿನ್ನೆ ತಡರಾತ್ರಿಯವರೆಗೂ ಜಾಮೀನು ಆದೇಶದ ಪ್ರತಿಯನ್ನು ಅಧಿಕಾರಿಗಳು ಸ್ವೀಕರಿಸದ ಕಾರಣ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದರೂ ಅವರನ್ನು ಬಿಡುಗಡೆ ಮಾಡಲಾಗಿರಲಿಲ್ಲ.

Also Read  ಮಾ. 2 ಅಥವಾ 3ಕ್ಕೆ ಅಧಿಕಾರಿಗಳಿಂದಲೇ ಬಿಬಿಎಂಪಿ ಬಜೆಟ್‌ ಮಂಡನೆ ಸಾಧ್ಯತೆ

error: Content is protected !!
Scroll to Top