ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ

(ನ್ಯೂಸ್ ಕಡಬ) newskadaba.com ಡಿ. 14: ರೈತರಿಗೆ ಅಡಮಾನ ರಹಿತವಾಗಿ ನೀಡಲಾಗುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂ ಕ್ 2 ಲಕ್ಷಕ್ಕೆ ಹೆಚ್ಚಿಸಿದೆ. ಇದು ಬರುವ ಜ. 1ರಿಂದಲೇ ಜಾರಿಗೆ ಬರಲಿದೆ.

ಈ ಮೊದಲು ಅಡಮಾನವಿಲ್ಲದೇ 1.6 ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್ಬಿಐನ ಈಹೊಸ ನಿರ್ದೇ ಶನದ ಮೂಲಕ, ರಾಷ್ಟ್ರ ವ್ಯಾಪಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಪಡೆಯುವ 2ಲಕ್ಷ ವರೆಗಿನ ಸಾಲಕ್ಕೆ ಅಡಮಾನ ಅಥವಾ ಇತರ ಅಗತ್ಯ ದಾಖಲೆಗಳ ಮಿತಿಯನ್ನು ತೆಗೆದುಹಾಕಲು ಬ್ಯಾಂಕ್‌ಗಳಿಗೆ ಹೇಳುತ್ತದೆ. ಕೃಷಿಯಲ್ಲಿ ಹೆಚ್ಚುತ್ತಿರುವ ಮೂಲ ಬಂಡವಾಳ, ಬೀಜ ಹಾಗೂ ಗೊಬ್ಬರ ವೆಚ್ಚವನ್ನು ಗಮದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಸಣ್ಣ ಹಾಗೂ ಅತಿ ಸಣ್ಣ ರೈತರನ್ನು ಒಳಗೊಂಡಂತೆ ಶೇ 86ರಷ್ಟು ರೈತರಿಗೆ ನೆರವಾಗಲಿದೆ ಎಂದು ಕೃಷಿ ಸಚಿವಾಲಯ ಹೇಳಿದೆ. ಈ ಹೊಸಮಾರ್ಗ ಸೂಚಿಯನ್ನು ತ್ವರಿತವಾಗಿ ಅಳವಡಿಸುವುದು ಹಾಗು ಹೆಚ್ಚು ರೈತರನ್ನು ತಲುಪುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಈಗಾಗಲೇ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.

Also Read  ?? Breaking News ದೇಶದಲ್ಲಿ 24 ಗಂಟೆಗಳಲ್ಲಿ 17,296 ಹೊಸ ಕೇಸು ➤ 4.90 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 15,301 ಮಂದಿ ಬಲಿ

error: Content is protected !!
Scroll to Top