(ನ್ಯೂಸ್ ಕಡಬ) newskadaba.com ಡಿ. 16 ದೆಹಲಿ: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಸೋಮವಾರ ತಿಳಿಸಿದೆ. ಅವರಿಗೆ 73 ವರ್ಷ. ಜಾಕಿರ್ ಹುಸೇನ್ ಅವರು ಇಡಿಯೋಪಥಿಕ್ ಪಲ್ಮನರಿ ಫೈಬ್ರೋಸಿಸ್‌ನಿಂದ ಉಂಟಾಗುವ ತೊಂದರೆಗಳಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಎರಡು ವಾರಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಜಾಕಿರ್ ಹುಸೇನ್ಗೆ 2009ರಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1988 ರಲ್ಲಿ ಪದ್ಮಶ್ರೀ ಮತ್ತು 2002 ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. 1990 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶ್ರೇಷ್ಠ ತಬಲಾ ವಾದಕ ಎಂದು ಪರಿಗಣಿಸಲ್ಪಟ್ಟ ಝಾಕಿರ್ ಹುಸೇನ್, ಪತ್ನಿ ಆಂಟೋನಿಯಾ ಮಿನ್ನೆಕೋಲಾ ಮತ್ತು ಹೆಣ್ಣುಮಕ್ಕಳು ಅನಿಸಾ ಖುರೇಷಿ, ಇಸಾಬೆಲ್ಲಾ ಖುರೇಷಿ ಅವರನ್ನು ಅಗಲಿದ್ದಾರೆ.