ಸೊಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ಗೆ 10ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ  ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

3 ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್‌ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಕೋರ್ಟ್ ಡಿ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಧುಗಿರಿ ಸಬ್ ಜೈಲಿಗೆ ಕರೆದೊಯ್ಯಲಾಗುತ್ತದೆ. ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್ ಸ್ನೇಹಿತರಾದ ವಿನಯ್ ಹಾಗೂ ಸೋಡಿಯಂ ಕೊಡಿಸಿದ್ದ ಪ್ರಜ್ವಲ್‌ನನ್ನು ಈಗಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಫಾರಂ ಹೌಸ್ ಮಾಲೀಕ ಜಿತೇಂದ್ರ ಜೈನ್ ಸದ್ಯ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Also Read  ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

error: Content is protected !!
Scroll to Top